ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಬಿಗ್ ಶಾಕ್

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಬಿಗ್ ಶಾಕ್

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.
ಇನ್ಮುಂದೆ ಅಂಗನವಾಡಿ ಟೀಚರ್ ಆಗಲು ಡಿಪ್ಲೊಮಾ ಮಾಡಿರಲೇಬೇಕು ಎಂಬ ಹೊಸ ನಿಯಮ ಜಾರಿಗೆ ತರುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಕ್ ನೀಡಲಾಗಿದೆ.
ಎನ್‍ಇಪಿ ನಿಯಮದಲ್ಲಿ ಮಾರ್ಪಾಡು ಮಾಡಿರುವ ಸರ್ಕಾರ ಡಿಪ್ಲೊಮಾ ಮಾಡಿರುವ ಮಹಿಳೆಯರನ್ನು ಮಾತ್ರ ಅಂಗನವಾಡಿ ಟೀಚರ್‍ಗಳನ್ನಾಗಿ ನೇಮಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ.

ಇದರ ಜತೆಗೆ ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲೂ 10ನೇ ತರಗತಿ ಇಲ್ಲವೇ ಪಿಯುಸಿ ಉತ್ತೀರ್ಣರಾಗಿರುವವರನ್ನು ಪರಿಗಣಿಸುವಂತೆಯೂ ಸೂಚನೆ ನೀಡಲಾಗಿದೆ.
ಅಂಗನವಾಡಿ ಕೇಂದ್ರಗಳೂ ಮಕ್ಕಳ ಆರೈಕೆ ಮತ್ತು ಅಭಿವೃದ್ಧಿ ಕೇಂದ್ರವಾಗಿರುವುದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ದೃಷ್ಟಿಕೋನದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಮದು ಮಹಿಳೆ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ತಿಳಿಸಿದೆ.