ಕೇಂದ್ರ ಬಜೆಟ್ 2023: ಅತ್ಯಂತ ನಿರಾಶದಾಯಕ ಎಂದ ಸಿದ್ದರಾಮಯ್ಯ

ಆಹಾರ ಸಬ್ಸಿಡಿಯಲ್ಲಿ 90 ಸಾವಿರ ಕೋಟಿ ಕಡಿಮೆಯಾಗಿದೆ. ಮನ್ರೇಗಾದಲ್ಲಿ 29 ಸಾವಿರ ಕೋಟಿ ರೂ. ಇಳಿಕೆ ಮಾಡುವ ಮೂಲಕ ರೈತರಿಗೆ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು.
ಈ ಬಾರಿ 1 ಲಕ್ಷದ 75 ಸಾವಿರ ಕೋಟಿ ರೂ. ಸಬ್ಸಿಡಿ ನೀಡುವ ಮೂಲಕ 50 ಸಾವಿರ ಕೋಟಿ ಕಡಿಮೆ ಮಾಡಲಾಗಿದೆ. ಸಬ್ಸಿಡಿ ಕಡಿಮೆ ಮಾಡಿದ್ರೆ ಗೊಬ್ಬರ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ರೈತರಿಗೆ ಸಂಕಷ್ಟವಾಗಲಿದೆ ಎಂದು ವಿಪಕ್ಷ ನಾಯಕ ತಿಳಿಸಿದರು.
ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನೂ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದಾರೆ. ಆದರೆ, ಯೋಜನೆಗೆ ಇನ್ನೂ ನೋಟಿಫಿಕೇಷನ್ ಆಗಿಲ್ಲ, ನೋಟಿಫಿಕೇಷನ್ ಆಗಿಲ್ಲ ಅಂದ್ರೆ 1 ರೂ. ವೆಚ್ಚ ಮಾಡಲು ಸಾಧ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.