ಹುಬ್ಬಳ್ಳಿ: ಕಳಸಾ-ಬಂಡೂರಿ (ಮಹದಾಯಿ) ವಿಚಾರವಾಗಿ ಪ್ರತಿಪಕ್ಷಗಳಿಂದ ಅನಗತ್ಯ ಗೊಂದಲ ಸೃಷ್ಟಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿ ವಿಸ್ತೃತ ಯೋಜನೆ ಕುರಿತು ಕೇಂದ್ರದ ಡಿಪಿಆರ್ ಗ್ರಿನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರು ಹೋರಾಟ ಮಾಡಿದ್ರು, ಈಗ ಆ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ ಎಂದರು.
ಇನ್ನು ನಿರಂತರವಾದ 20 - 25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದೆ. ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ಸೂಚಿಸುತ್ತೆ. ಅವರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕಡೆಸಿಕೊಳ್ಳುವುದಿಲ್ಲ. ಡಿಪಿಆರ್ ಆಗಿದೆ - ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಪಂಚಮಸಾಲಿ- ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರ: ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗಲ್ಲ.ಇದು ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇದರಲ್ಲಿ ನಮ್ಮ ಸರ್ಕಾರ ಉದ್ದೇಶ ಹೇಳಿದ್ದೇವೆ.
ಅಂತಿಮ ವರದಿಯಲ್ಲಿ ಅಂಕಿ - ಅಂಶಗಳ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ
ಸಂಬಂಧ ಪಟ್ಟವರ ಜೊತೆ ಚರ್ಚಿಸಲಾಗುವುದು.
ಯಾವುದೇ ಕಾರಣಕ್ಕೂ
ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆಲ ವರ್ಗದ ಜನರಿಗೆ ಶೈಕ್ಷಣಿಕ- ಉದ್ಯೋಗದಲ್ಲಿ ಹಿನ್ನಡೆಯಾಗಿದ್ದು ನಿಜ. ಅವರಿಗೆ ನ್ಯಾಯಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟೀಕರಣ ಬೇಕಾದ್ರೆ ಕೊಡುತ್ತೇವೆ. ಇದರಲ್ಲಿ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯಿಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ. ಈಗ ನಾವು ಮಾಡುತ್ತಿರೋದ್ರಿಂದ ಸಮಸ್ಯೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.