ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ತಂಡ ಪೊಲೀಸರ ವಶಕ್ಕೆ

ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ತಂಡ ಪೊಲೀಸರ ವಶಕ್ಕೆ

ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ದೆಹಲಿಯ ಖಾಸಗಿ ಸಂಸ್ಥೆಯ 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ತಂಡ ಹೊಸಪೇಟೆ ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿ ಮಾಹಿತಿ ಸಂಗ್ರಹಿಸುತ್ತಿತ್ತು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆಯ ಪೊಲೀಸರು ಇಬ್ಬರು ಯುವತಿಯರು ಸೇರಿ 7 ಜನರನ್ನು ವಶಕ್ಕೆ ಪಡೆದಿದ್ದಾರೆ.