ಅನಧಿಕೃತ 'ಟ್ಯೂಷನ್ ಸೆಂಟರ್' ನಡೆಸಿದ್ರೆ ಹುಷಾರ್ : ಶೀಘ್ರದಲ್ಲೇ ದಾಳಿ, ಕಠಿಣ ಕ್ರಮದ ಎಚ್ಚರಿಕೆ
ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಟ್ಯೂಷನ್ ತರಬೇತಿ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿದ್ದಲ್ಲಿ, ನಿಯಮಾನುಸಾರ ಪರಿಶೀಲಿಸಿ ಶಿಕ್ಷಣ ಕಾಯಿದೆಯ ಅನ್ವಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅನಧಿಕೃತ ಕೋಚಿಂಗ್ ಸೆಂಟರ್ಗಳ ಕುರಿತಂತೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
ಘಟನೆ ನಡೆದ ಬಳಿಕ ಸರ್ಕಾರ, ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲ ಎಂಬ ಮಾತು ಎಚ್ಚೆತ್ತ ಶಿಕ್ಷಣ ಇಲಾಖೆ ಅನಧಿಕೃತ ಕೋಚಿಂಗ್ ಸೆಂಟರ್ ಬಗ್ಗೆ ಮಾಹಿತಿ ಸಂಗ್ರಹಿಸಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿ ಪತ್ರ ಬರೆದಿದ್ದು, ಅದನ್ನು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರವಾನಿಸಲಾಗಿದೆ.
ಶೀಘ್ರದಲ್ಲೇ ದಾಳಿ
ಜಿಲ್ಲೆಯಲ್ಲಿ ಅಧಿಕೃತ ಹಾಗೂ ಅನಧಿಕೃತ ಕೋಚಿಂಗ್ ಸೆಂಟರ್ಗಳು ಎಷ್ಟಿವೆ, ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಲಾಗಿದೆ. ಮಾಹಿತಿ ಸಂಗ್ರಹಿಸುವ ಕಾರ್ಯ ಅಧಿಕಾರಿಗಳಿಂದ ನಡೆದಿದೆ. ದೀಪಾವಳಿ ಹಬ್ಬವಿರುವ ಕಾರಣದಿಂದ ತಡವಾಗಿದೆ. ಹಬ್ಬ ಮುಗಿದ ಕೂಡಲೇ ಅದರ ಮಾಹಿತಿಯನ್ನು ಇಲಾಖೆಗೆ ಕಳುಹಿಸುತ್ತೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಹೇಳಿದ್ದಾರೆ.
ಸರ್ಕಾರದ ಆದೇಶ
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, ಅನಧಿಕೃತ ಟ್ಯೂಷನ್ ತರಬೇತಿ ಹಾಗೂ ವಸತಿ ಮನೆ ಪಾಠಗಳ ಹಾವಳಿ ತಡೆಯುವಂತೆ ದೂರುಗಳು ಬಂದ ಹಿನ್ನೆಲೆ ಕರ್ನಾಟಕ ಶಿಕ್ಷಣ ಕಾಯಿದೆ 1983 ರ ನಿಯಮ 35 ರಡಿ ಟ್ಯುಟೋರಿಯಲ್ ಕೇಂದ್ರಗಳನ್ನ ನೊಂದಾಯಿಸುವುದು ಅವಶ್ಯವಾಗಿರುತ್ತದೆ. ಹಾಗೂ ಪ್ರಾಥ,ಮಿಕ ಮತ್ತು ಪ್ರೌಢ ಶಿಕ್ಷಣ ವಿಭಾಗಕ್ಕೆ ಜಿಲ್ಲಾ ಉಪ ನಿರ್ದೇಶಕರನ್ನು ನೊಂದಣಿ ಪ್ರಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಆದ್ದರಿಂದ 1 ರಿಂದ 7 ಹಾಗೂ 8 ರಿಂದ 10 ನೇ ತರಗತಿವರೆಗೆ ಟ್ಯುಟೋರಿಯಲ್ ಸಂಸ್ಥೆಗಳನ್ನು ನೊಂದಾಯಿಸಲು ಜಿಲ್ಲಾ ಉಪನಿರ್ದೇಶಕರೇ ನೊಂದಣಿ ಪ್ರಾಧಿಕಾರಿಗಳಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಟ್ಯೂಷನ್ ತರಬೇತಿ ಕೇಂದ್ರಗಳು ಅನಧಿಕೃತವಾಗಿ ನಡೆಯುತ್ತಿದ್ದಲ್ಲಿ,, ನಿಮಮಾನುಸಾರ ಪರಿಶೀಲಿಸಿ ಶಿಕ್ಷಣ ಕಾಯಿದೆಯ ಅನ್ವಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಬಾಲಕಿಯನ್ನು ಟ್ಯೂಷನ್ ಗೆ ಕರೆಸಿಕೊಂಡ ಶಿಕ್ಷಕ ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಭೀತಾಗಿತ್ತು. . ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಪೋಷಕರಿಗೆ ಗೊತ್ತಾದರೆ ಅಪಾಯ ಎಂದು ಭಾವಿಸಿದ ಈತ ಬಾಲಕಿ ತಲೆಗೆ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದನು. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ನಡೆದ ನಂತರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅನಧಿಕೃತ ಕೋಚಿಂಗ್ ಸೆಂಟರ್ಗಳ ಕುರಿತಂತೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.