ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭೂಕಂಪ; 4.3 ತೀವ್ರತೆ ದಾಖಲು

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭೂಕಂಪ; 4.3 ತೀವ್ರತೆ ದಾಖಲು

ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಕಾಬೂಲ್‌ನಿಂದ ಪೂರ್ವಕ್ಕೆ 85 ಕಿಲೋಮೀಟರ್ ದೂರದಲ್ಲಿ ಇಂದು 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಬುಧವಾರ ಮುಂಜಾನೆ 05:49(IST)ಕ್ಕೆ ಭೂಮಿಯಿಂದ 10 ಕಿಲೋಮೀಟರ್ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಿದೆ

ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಮದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ, ಸೋಮವಾರ ಮುಂಜಾನೆ, ಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ 4.2 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ವರದಿ ಮಾಡಿದೆ.