ಅಮಿತ್ ಶಾ ಅಂಗಳಕ್ಕೆ 'ಸಾಹುಕಾರ್' CD : ಇಂದು ದೆಹಲಿಗೆ 'ರಮೇಶ್ ಜಾರಕಿಹೊಳಿ' ಪ್ರಯಾಣ

ಬೆಂಗಳೂರು : ಸಿಬಿಐಗೆ ಸಿಡಿ ಪ್ರಕರಣ ವಹಿಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಾಗಲೇ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.
ಇದೀಗ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿ ಅಮಿತ್ ಶಾ ಭೇಟಿ ಮಾಡಲು ಸಜ್ಜಾಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದರು. ಸಿಡಿ ಪ್ರಕರಣವನ್ನು ಸಿಬಿಐ ತನಿಖೆ ನೀಡುವ ಸಂಬಂಧ ಸಿಎಂ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದರು.. ಎಲ್ಲಾ ದಾಖಲೆಗಳಿವೆ ಎನ್ನುತ್ತಲೇ ಈಗ ಬಿಡುಗಡೆ ಮಾಡಲ್ಲ ಸಿಬಿಐಗೆ ವಹಿಸುತ್ತೇನೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.
ಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಯವ್ರು ನನಗೆ ಮಾಹಿತಿ ನೀಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಕೊಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದರು.