ಅಯೋಧ್ಯೆ' ಮಾದರಿ ರಾಮಮಂದಿರ ನಿರ್ಮಿಸಲು ಸಿಎಂಗೆ ಸಚಿವ ಅಶ್ವತ್ಥನಾರಾಯಣ ಪತ್ರ
ರಾಮನಗರದ ಐತಿಹಾಸಿಕ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆಯಲ್ಲಿನ ರಾಮಮಂದಿರ ಮಾದರಿಯಲ್ಲಿಯೇ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯಿಂದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಚಿವ ಡಾ. ಅಶ್ವತ್ಥನಾರಾಯಣ ಒಲವು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ. ಪತ್ರದ ಒಂದು ಪ್ರತಿಯನ್ನ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಬರೆದು ಗಮನ ಸೆಳೆದಿದ್ದಾರೆ.