ಅಯ್ಯೋ ದುರ್ವಿಧಿಯೇ : ಬೈಕ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದವನ ಮೇಲೆ ಎರಗಿದ ಕಾರು, ಸ್ಥಳದಲ್ಲೇ ಸವಾರ ಸಾವು

ಅಯ್ಯೋ ದುರ್ವಿಧಿಯೇ : ಬೈಕ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದವನ ಮೇಲೆ ಎರಗಿದ ಕಾರು, ಸ್ಥಳದಲ್ಲೇ ಸವಾರ ಸಾವು

ಮೈಸೂರು : ಬೈಕ್ ನಲ್ಲಿ ಕುಳಿತು ಜ್ಯೂಸ್ ಕುಡಿಯುವಾಗಲೇ ಕಾರು ಎರಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು-ಟಿ ನರಸೀಪುರ ರಸ್ತೆಯಲ್ಲಿ ನಡೆದಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಜ್ಯೂಸ್ ಕುಡಿಯಲೆಂದು ಬೈಕ್ ನಿಲ್ಲಿಸಿದ್ದರು, ಬೈಕ್ ನಲ್ಲಿಯೇ ಕುಳಿತುಕೊಂಡು ಜ್ಯೂಸ್ ಕುಡಿಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಬೈಕ್ ಮೇಲೆ ಎರಗಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಂತರ ಎಸ್ಕೇಪ್ ಆಗಲು ಯತ್ನಿಸಿದ ಕಾರು ಚಾಲಕನನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೈಸೂರು-ಟಿ ನರಸೀಪುರ ರಸ್ತೆಯಲ್ಲಿ ಘಟನೆ ನಡೆದಿದೆ.

ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ ಪ್ರಕಟ: ಹಾಸನ ಅಭ್ಯರ್ಥಿಯ ಹೆಸರು ಇರುತ್ತದೆ - ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ( JDS Candidate List ) ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಪಟ್ಟಿ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂದು ಮಂಗಳವಾರ ಆಗಿರುವುದರಿಂದ ಪಟ್ಟಿ ಬಿಡುಗಡೆ ಆಗಿಲ್ಲ. ದೇವೆಗೌಡರು ನಾಳೆ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರ ಪಟ್ಟಿ ಹೊರಬರಲಿದೆ ಎಂದರು.

ನನಗಿಂತ ನಿಮಗೆ ಹಾಸನ ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ ಎಂದು ಮಾಧ್ಯಮಗಳಿಗೆ ಹೇಳಿದ ಅವರು, ಹಾಸನವನ್ನು ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅದನ್ನು ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಆ ಪಟ್ಟಿಯಲ್ಲಿ ಹಾಸನದ್ದು ಒಳಗೊಂಡಂತೆ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.ಮೊದಲ ಪಟ್ಟಿ ಬಿಡುಗಡೆಯಾದಗಲೂ ಯಾವುದೇ ಸಮಸ್ಯೆ ಇರಲಿಲ್ಲ. ಎರಡನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ. ಇದರಿದ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ 2-3 % ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟೋದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡಲ್ಲ. ಕಾರ್ಯಕರ್ತರ ಅಪೇಕ್ಷೆ, ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.ಕಾಂಗ್ರೆಸ್ ಪಟ್ಟಿ ರಿಲೀಸ್ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ನಾನು ಚಿಂತೆ ಮಾಡಿಲ್ಲ. ನಾವು ನಮ್ಮದೇ ರೀತಿಯಲ್ಲಿ ಅಭ್ಯರ್ಥಿಗಳನ್ನು ತೀರ್ಮಾನ ಮಾಡುತ್ತೇವೆ ಎಂದರು.