ಜಾರ್ಖಂಡ್‌ನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; 14 ಮಂದಿ ಸಾವು, ಹಲವರಿಗೆ ಗಾಯ

ಪಾಟ್ನಾ: ಜಾರ್ಖಂಡ್‌ನ ಧನ್‌ಬಾದ್‌ನ ಬಹುಮಹಡಿ ಕಟ್ಟಡದಲ್ಲಿ ನಿನ್ನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 14 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ನಗರದ ಜನನಿಬಿಡ ಪ್ರದೇಶವಾದ ಜೋರಾಫಟಕ್‌ನಲ್ಲಿರುವ 13 ಅಂತಸ್ತಿನ ಕಟ್ಟಡ ಆಶೀರ್ವಾದ್ ಟವರ್‌ನಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ ಗಾಯಗೊಂಡ 11 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಸುಖದೇವ್ ಸಿಂಗ್ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ 10 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, 'ಧನ್‌ಬಾದ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ತೀವ್ರ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ.