ಅಶ್ವತ್ಥನಾರಾಯಣ ಮಂದಿರವನ್ನು ಕಟ್ಟಲಿ ಎಂದ ಡಿಕೆಶಿ; ಅವರಿಗೂ ರಾಮನಗರಕ್ಕೂ ಸಂಬಂಧ ಏನು ಎಂದ ಎಚ್‌ಡಿಡಿ

ಅಶ್ವತ್ಥನಾರಾಯಣ ಮಂದಿರವನ್ನು ಕಟ್ಟಲಿ ಎಂದ ಡಿಕೆಶಿ; ಅವರಿಗೂ ರಾಮನಗರಕ್ಕೂ ಸಂಬಂಧ ಏನು ಎಂದ ಎಚ್‌ಡಿಡಿ

ಬೆಳಗಾವಿ: ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು ಎಂಬ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ಯೋಜನೆ ಕುರಿತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್‌ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ಅಯೋಧ್ಯಾ ರಾಮಮಂದಿರವನ್ನಾದರೂ ಕಟ್ಟಲಿ, ಸೀತಾ ಮಂದಿರವನ್ನಾದರೂ ಕಟ್ಟಲಿ, ಬೇಕಿದ್ದರೆ ಅಶ್ವತ್ಥ ನಾರಾಯಣ ಮಂದಿರವನ್ನಾದರೂ ಕಟ್ಟಲಿ. ಮೂರು ವರ್ಷದ ಉಸ್ತುವಾರಿ ಸಚಿವರಾಗಿ ಬಂದು ಏನೋ ಕ್ಲೀನ್ ಮಾಡುತ್ತೇವೆ ಎನ್ನುತ್ತಿದ್ದರು. ಈಗ ಎಲ್ಲಾವನ್ನೂ ಕ್ಲೀನ್ ಮಾಡಿದ್ದಾರೆ. ಇಡೀ ರಾಮನಗರ ಕ್ಲೀನ್ ಮಾಡಿರುವುದನ್ನು ನೋಡಿದ್ದೇನೆ ಎಂದು ವ್ಯಂಗ್ಯ ಮಾಡಿದರು.

ರಾಯಚೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ದೇವಸ್ಥಾನವನ್ನು ಮಾಡಲಿ. ಅಶ್ವತ್ಥನಾರಾಯಣ ಅವರ ಬಗ್ಗೆ ವಿಧಾನಸಭೆಯಲ್ಲೆ ಸಾಕಷ್ಟು ಚರ್ಚೆ ಆಗಿದೆ. ಅವರಿಗೂ ರಾಮನಗರಕ್ಕೂ ಏನು ಸಂಬಂಧ? ಈಗ ತುಂಬಾ ಮಾತನಾಡುವುದು ಬೇಡ ಎಂದರು.