ಆಪ್ನ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಪೃಥ್ವಿ ರೆಡ್ಡಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದು ಈ ಬಗ್ಗೆ ಪೃಥ್ವೀ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಸಂದರ್ಭ ಅವರು ಒಟ್ಟು 80 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭ ಮಾತನಾಡಿದ ಅವರು 'ಎಎಪಿಯು ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ ಹಾಗೂ ಭಾರತವು ವಿಶ್ವದ ನಂಬರ್ ಒನ್ ಸ್ಥಾನ ಅಲಂಕರಿಸುವುದಕ್ಕೆ ಭ್ರಷ್ಟಾಚಾರ ಅಡ್ಡಿಯಾಗಿದೆ. ಭಾರತವನ್ನು ಶೇ. 100ರಷ್ಟು ಭ್ರಷ್ಟಾಚಾರ ಮುಕ್ತ ಮಾಡಬೇಕೆಂದರೆ ಶೇ. 100ರಷ್ಟು ಪ್ರಮಾಣಿಕರಾಗಿರುವವರು ನಮ್ಮನ್ನು ಪ್ರತಿನಿಧಿಸಬೇಕು' ಎಂದು ಹೇಳಿದ್ದಾರೆ.