ಆಸಿಸ್ vs ದ. ಆಫ್ರಿಕಾ ಟೆಸ್ಟ್ ಸರಣಿ: ವೈಟ್‌ವಾಶ್‌ನತ್ತ ಆಸ್ಟ್ರೇಲಿಯಾ ಚಿತ್ತ

ಆಸಿಸ್ vs ದ. ಆಫ್ರಿಕಾ ಟೆಸ್ಟ್ ಸರಣಿ: ವೈಟ್‌ವಾಶ್‌ನತ್ತ ಆಸ್ಟ್ರೇಲಿಯಾ ಚಿತ್ತ

ಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಬುಧವಾರದಿಂದ ಆರಂಭವಾಗಲಿದೆ. ಈಗಾಗಲೇ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದ್ದು ಸರಣಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಅಂತಿಮ ಪಂದ್ಯವನ್ನು ಕೂಡ ಗೆದ್ದು ಸರಣಿಯನ್ನು ವೈಟ್‌ವಾಶ್ ಮಾಡುವತ್ತ ಆಸ್ಟ್ರೇಲಿಯಾ ತಂಡ ಚಿತ್ತ ನೆಟ್ಟಿದೆ.

ಅಲ್ಲದೆ ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಸ್ಥಾವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಗಾಬಾದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಅಂತರದಿಂದ ಆಸ್ಟ್ರೇಲಿಯಾ ಅಮೋಘ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾದ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ಈ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ ಕೇವಲ 152 ಹಾಗೂ 99 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಗಿತ್ತು. ಈ ಪಂದ್ಯ ಕೇವಲ 2 ದಿನದಲ್ಲಿ ಅಂತ್ಯವಾಗುವ ಮೂಲಕ ಸಾಕಷ್ಟು ಚರ್ಚೆಗೂ ನಾಂದಿ ಹಾಡಿತ್ತು.

ಇನ್ನು ಎರಡನೇ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ತಂಡ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಆಸಿಸ್ ಪಡೆ ಇನ್ನಿಂಗ್ಸ್ ಹಾಗೂ 182 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ವಾರ್ನರ್ ಅಮೋಘ ದ್ವಿಶತಕ ಸಿಡಿಸುವ ಮೂಲಕ ಮತ್ತೆ ಫಾರ್ಮ್ ಕಂಡುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಖಯಾ ಜೊಂಡೋ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ, ಸೈಮನ್ ಹಾರ್ಮರ್, ಲಿಜಾಡ್ ವಿಲಿಯಮ್ಸ್, ಹೆನ್ರಿಚ್ ಕ್ಲಾಸೆನ್, ಜೆರಾಲ್ಡ್ ಕೋಟ್ಜಿ

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ(ಕೆಟ್ ಕೀಪರ್), ಆಶ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್(ನಾಯಕ), ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಜೋಶ್ ಹ್ಯಾಜಲ್ವುಡ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಲ್ಯಾನ್ಸ್ ಮೋರಿಸ್