ಇಂಡಿಗೋ ವಿಮಾಣದಲ್ಲಿ ಬಾಂಬ್ ಬೆದರಿಕೆ ಸಂದೇಶ ಪತ್ತೆ

ಇಂಡಿಗೋ ವಿಮಾಣದಲ್ಲಿ ಬಾಂಬ್ ಬೆದರಿಕೆ ಸಂದೇಶ ಪತ್ತೆ

ದೇವನಹಳ್ಳಿ: ಕಳೆದ ದಿನ ಕೋಲ್ಕತ್ತಾದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾಣ ಸೀಟ್ ವೊಂದರಲ್ಲಿ ಸಿಕ್ಕ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆ ಸಂದೇಶ ಪತ್ತೆಯಾಗಿದೆ. ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ತಕ್ಷಣವೇ ತಪಾಸಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ತಿಳಿದು ಬಂದಿದೆ. ಈ ಸಂಬಂಧ ಕೇಸ್ ದಾಕಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.