ರಾಜ್ಯ ಬಜೆಟ್ ಅಧಿವೇಶನ : ಇಂದಿನ ರಾಜ್ಯಪಾಲರ ಭಾಷಣಕ್ಕೆ ಸಿದ್ದರಾಮಯ್ಯ ಗೈರು

ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಫೆಬ್ರವರಿ 17ರಂದು ಬಜೆಟ್ ಮಂಡನೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.ರಾಜ್ಯದಲ್ಲಿ ಬಜೆಟ್ ಅಧಿವೇಶನ ಶುರುವಾಗಲಿದೆ. ಈ ಹಿನ್ನೆಲೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿರುತ್ತದೆ. ಈಗಿನ ಶಾಸಕರು ಐದು ವರ್ಷ ಅವಧಿಯನ್ನು ಯಶಸ್ವಿಯಾಗಿ ಮುಗಿಸಿದ್ದೀರಿ. ಕೊನೆಯ ಅಧಿವೇಶನ ಎಂದು ಯಾರೂ ನಿರ್ಲಕ್ಷಿಸದೇ ಪಾಲ್ಗೊಳ್ಳಿ ಎಂದು ಸ್ಪೀಕರ್ ಕಾಗೇರಿ ಕೇಳಿಕೊಂಡಿದ್ದಾರೆ.