ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳ

ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳ

ಬೆಂಗಳೂರು: ಕೌಶಲಾಭಿವೃದ್ಧಿ ಇಲಾಖೆಯ ವತಿಯಿಂದ ಇಂದು ಮಲ್ಲೇಶ್ವರದ 18ನೇ ಕ್ರಾಸ್‌ ನಲ್ಲಿ ಪ್ರಥಮ ದರ್ಜೆ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಇಂದು ನಮ್ಮ ಮಲ್ಲೇಶ್ವರ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಮೇಳದಲ್ಲಿ ಜೆ.ಪಿ ಮೋರ್ಗನ್‌, ಐಸಿಐಸಿಐ , ಕಾನ್ಸಂಟ್ರಿಕ್ಸ್‌ , ಎಸ್‌ ಬಿಐ ಲೈಫ್‌ , ಪೇಟಿಎಂ, ಎಲ್‌ ಐಸಿ ಸೇರಿದಂತೆ ಮುಂತಾದ 125ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದೆ. ಒಟ್ಟು 28 ಸಾವಿರ ಉದ್ಯೋಗಾವಕಾಶಗಳಿದ್ದು, ಯುವಜನರಿಗೆ ಇದು ಉತ್ತಮ ವೇದಿಕೆಯಾಗಲಿದೆ.