ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಬೇಡಿಕೆ : ಇಂದು ಶಿಗ್ಗಾಂವಿಯ ಸಿಎಂ ಮನೆ ಎದುರು ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಬೇಡಿಕೆ : ಇಂದು ಶಿಗ್ಗಾಂವಿಯ ಸಿಎಂ ಮನೆ ಎದುರು ಪ್ರತಿಭಟನೆ

ಹಾವೇರಿ : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾ ನೀಡಿರುವ 2 ಡಿ ಮೀಸಲಾತಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಬೇಡಿಕೆ ಇಡೇರಿಕೆಗಾಗಿ ಇಂದು ಶಿಗ್ಗಾಂವಿಯ ಸಿಎಂ ಮನೆ ಎದುರು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಶಿಗ್ಗಾಂವಿಯ ಚೆನ್ನಮ್ಮ ಸರ್ಕಲ್‌ನಿಂದ ಪಾದಯಾತ್ರೆ ಶುರುವಾಗಲಿದ್ದು, ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಪ್ರತಿಭಟನೆಯಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಕೂಡಲ ಜಯಮೃತ್ಯುಂಜಯ ಸ್ವಾಮೀಜಿ, ಶಾಸನ ಯತ್ನಾಳ್‌, ಅರವಿಂದ್‌ ಬೆಲ್ಲದ್‌ , ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಹಲವರು ಭಾಗಿಯಾಗುವ ಸಾಧ್ಯತೆಯಿದೆ .