ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದುದೆಹಲಿ ಪ್ರವಾಸ ಕೈಗೊಳ್ಳಲಿದ್ದು, ತೀವ್ರ ಕೂತುಹಲಕ್ಕೆ ಕಾರಣವಾಗಿದ್ದು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ನಾಳೆ ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಚಿವಾಕಾಂಕ್ಷಿಗಳ ಒತ್ತಡ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ನಾಳೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.