ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 26 ರ ಇಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನವೆಂಬರ್ 26 ರ ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ಶಿರಮಗೊಂಡನಹಳ್ಳಿಯಲ್ಲಿ ನಡೆಯಲಿರುವ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಎಸ್.ಎ ರವೀಂದ್ರನಾಥ್ ರವರ 77ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನವನ್ನು ಉದ್ಘಾಟಿಸುವರು. ಮಧ್ಯಾಹ್ನ 02 ಗಂಟೆಗೆ ಜಿಎಂಐಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳಸಲಿದ್ದಾರೆ.