ಇಂದು 100 ಕ್ಕೂ ಹೆಚ್ಚು 'ಜೆಡಿಎಸ್' ಅಭ್ಯರ್ಥಿಗಳ ಪಟ್ಟಿ ಪ್ರಕಟ

ಇಂದು 100 ಕ್ಕೂ ಹೆಚ್ಚು 'ಜೆಡಿಎಸ್' ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಶುಕ್ರವಾರ ಶ್ರೀನಿವಾಸ ಕಲ್ಯಾಣ ಮುಗಿದ ನಂತರ ದೇವರ ಅನುಗ್ರಹ ಪಡೆದು 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಅವರು ಇದೇ ವೇಳೆ ಪ್ರಕಟಿಸಿದರು.