ಇತಿಹಾಸ ಸೃಷ್ಟಿ: ತೆಲಂಗಾಣದಲ್ಲಿ ಮೊದಲ ಬಾರಿಗೆ ಸರ್ಕಾರಿ ವೈದ್ಯರಾಗಿ ಇಬ್ಬರು ಮಂಗಳಮುಖಿಯರು ನೇಮಕ!
ಹೈದರಾಬಾದ್: ತೆಲಂಗಾಣದ ಇಬ್ಬರು ತೃತೀಯಲಿಂಗಿಗಳು ತಮ್ಮ ವೈಯಕ್ತಿಕ ಜೀವನದ ಸವಾಲುಗಳ ನಡುವೆ ಎಂಬಿಬಿಎಸ್ ಪದವಿ ಮುಗಿಸಿ ಸರ್ಕಾರಿ ವೈದ್ಯರಾಗಿ ನೇಮಕವಾಗಿದ್ದಾರೆ. ಇವರು ರಾಜ್ಯದಲ್ಲಿ ಸರ್ಕಾರಿ ಸೇವೆಗೆ ಸೇರಿದ ಮೊದಲ ಟ್ರಾನ್ಸ್‌ಜೆಂಡರ್ ವೈದ್ಯರಾಗುವ ಮೂಲಕ ಇತಿಹಾಸ ಬರೆದಿದ್ದಾರೆ.
ಪ್ರಾಚಿ ರಾಥೋಡ್ ಮತ್ತು ರುತ್ ಜಾನ್ ಪಾಲ್ ಇತ್ತೀಚೆಗೆ ಸರ್ಕಾರಿ ಉಸ್ಮಾನಿಯಾ ಜನರಲ್ ಹಾಸ್ಪಿಟಲ್ (OGH) ಗೆ ವೈದ್ಯಕೀಯ ಅಧಿಕಾರಿಗಳಾಗಿ ಸೇವೆಗೆ ಸೇರಿದ್ದಾರೆಮಾಧ್ಯಮಗಳೊಂದಿಗೆ ಮಾತನಾಡಿದ 2015 ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ ರಾಥೋಡ್, ಲಿಂಗದ ಕಾರಣಕ್ಕಾಗಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕೆಲಸದಿಂದ ನಮ್ಮನ್ನು ತೆಗೆದುಹಾಕಲಾಗಿತ್ತು. ನಾನು ಎಷ್ಟೇ ಸಾಧನೆ ಮಾಡಿದರೂ ನಾನು ಅನುಭವಿಸಿದ ಕಳಂಕ ಮತ್ತು ತಾರತಮ್ಯ ಎಂದಿಗೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ರಾಥೋಡ್ ಅವರು ಸ್ನಾತಕೋತ್ತರ ಪದವಿ ಪಡೆಯಲು ದೆಹಲಿಗೆ ಹೋಗಿದ್ದರು ಆದರೆ ಪ್ರತಿಕೂಲ ವಾತಾವರಣದಿಂದಾಗಿ ಹೈದರಾಬಾದ್‌ಗೆ ಹಿಂತಿರುಗಬೇಕಾಯಿತು.
ಆದರೆ, ರಾಥೋಡ್ ಇಲ್ಲಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಲೇ ತುರ್ತು ಔಷಧದಲ್ಲಿ ಡಿಪ್ಲೊಮಾ ಮಾಡಿದ್ದಾರೆ.