ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು ; ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸದ ಹಿನ್ನೆಲೆಯಲ್ಲಿ ಇಂದು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಲಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆದಿದ್ದು, ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ಶಾಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.