ಇನ್ನೂ 5-10 ವರ್ಷ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ಶಿವಮೊಗ್ಗ : ನಾನು ರಾಜಕೀಯದಿಂದ ನಿವೃತ್ತಿ ಪಡೆದಿಲ್ಲ. ಇನ್ನೂ 5-10 ವರ್ಷ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯದಿಂದ ನಿವೃತ್ತಿ ಘೋಷಿಸಿಲ್ಲ.
140ರಿಂದ 150 ಸ್ಥಾನಗಳಲ್ಲಿ ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ತಯಾರಿ ಮಾಡಲಾಗುತ್ತಿದೆ. ನನಗೆ ಹೆಚ್ಚಿನ ಸಮಯ ನೀಡಿ ಹಳ್ಳಿಗೆ ಪ್ರವಾಸ ಮಾಡಿ ಎಂದು ಸಲಹೆ ನೀಡಿದ್ದಾರೆ. ಅಧಿವೇಶನ ಮುಗಿದ ಮೇಲೆ ಕಾರ್ಯಕರ್ತರೊಂದಿಗೆ ರಾಜ್ಯ ಪ್ರವಾಸ ಆರಂಭವಾಗಲಿದೆ ಎಂದರು