ಇನ್ನೆರಡು ದಿನದಲ್ಲಿ ವರುಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ : ಮಾಜಿ ಸಚಿವ ವರ್ತೂರು ಪ್ರಕಾಶ್

ಇನ್ನೆರಡು ದಿನದಲ್ಲಿ ವರುಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ : ಮಾಜಿ ಸಚಿವ ವರ್ತೂರು ಪ್ರಕಾಶ್

ದಾವಣಗೆರೆ : ಇನ್ನೆರಡು ದಿನಗಳಲ್ಲಿ ವರುಣ ಕ್ಷೇತ್ರಕ್ಕೆ ಬಿಜೆಪಿಯ ಸೂಕ್ತ ಅಭ್ಯರ್ಥಿಯ ಘೋಷಣೆಯಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿದ್ದರಾಮಯ್ಯಗೆ ವರುಣ ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಿದೆ.

ಕೋಲಾರ ಕ್ಷೇತ್ರದ ಟಿಕೆಟ್ ಸಹ ಸಿಗಬಹುದು. ಆದರೆ 2 ಕ್ಷೇತ್ರಗಳಲ್ಲೂ ಸಿದ್ದರಾಮಯ್ಯ ಸೋಲಲಿದ್ದಾರೆ. ವರುಣ ಕ್ಷೇತ್ರಗಳ ಪ್ರಬಲ ಅಭ್ಯರ್ಥಿಯನ್ನು ಹುಡುಕಿ ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ ಎಂದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ವರ್ಚಸ್ಸು ಮುಗಿದು ಹೋಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಅವರಲ್ಲಿ ಒಗ್ಗಟ್ಟು ಇಲ್ಲ. ಸಿದ್ದರಾಮಯ್ಯ ಸಿಎಂ ಆಗುತ್ತಾರೆಂದು ಕುರುಬರು ಬೆಂಬಲಿಸಿದ್ದರು. ಆದರೆ ಕುರುಬ ಸಮುದಾಯ ಈಗ ಬಿಜೆಪಿ ಪರ ಇದೆ ಎಂದು ಹೇಳಿದ್ದಾರೆ.