ಇನ್ಮುಂದೆ ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ

ಇನ್ಮುಂದೆ ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್‌‌ ಮೂಲಕ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್‌‌ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಒಂದು ವರ್ಷದಲ್ಲಿ ಡ್ರೋನ್‌‌‌ ಮೂಲಕ ಸರ್ವೆ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು. ಈ ಕಾರ್ಯ ಪೂರ್ಣಗೊಂಡ ಬಳಿಕ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಟಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ. ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದಿದ್ದಾರೆ.