ಈ ಬಾರಿ ರಾಜ್ಯದಲ್ಲಿ ಜೆಡಿಎಸ್ 100-120 ಸ್ಥಾನ ಗೆಲ್ಲಲಿದೆ : ಮಾಜಿ ಸಿಎಂ HDK
ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 100-120 ಸ್ಥಾನ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾವು ಚುನಾವಣೆಯಲ್ಲಿ 100-120 ಸ್ಥಾನ ಗೆಲ್ಲುತ್ತೇವೆ.
ಕೆಲವು ಕಾರಣಗಳಿಂದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿಗಳ ವಿಚಾರದಲ್ಲಿ ಚರ್ಚೆ ಮಾಡಿ ಫೈನಲ್ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ ಗೊಂದಲವಿಲ್ಲ ಎಂದು ಹೇಳಿದ್ದಾರೆ.