ಈ ಬಾರಿ ವರುಣಾ ಸೇರಿದಂತೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲ್ಲ :ಶಾಸಕ ಯತೀಂದ್ರ ಹೇಳಿಕೆ
ಮಂಡ್ಯ : ಈ ಬಾರಿಯ ಚುನಾವಣೆಯಲ್ಲಿ ನಾನು ವರುಣಾ ಸೇರಿದಂತೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಶಾಸಕ ಡಾ. ಯತೀಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಗೆ ಈ ಬಾರಿಯ ಚುನಾವಣೆ ಕೊನೆಯ ಚುನಾವಣೆ.
ಒಬ್ಬ ಮಗನಾಗಿ ತಂದೆ ಸಿಎಂ ಆಗಲಿ ಎಂದು ಆಸೆ ಪಡುವುದು ತಪ್ಪಾ..ಖಂಡಿತ ನನ್ನ ತಂದೆ ಮತ್ತೆ ಸಿಎಂ ಆಗಬೇಕು ಎಂದು ಆಸೆಪಡುತ್ತೇನೆ ಎಂದು ಹೇಳಿದ್ದಾರೆ. ಮತ್ತೆ ಸಿಎಂ ಆದರೆ ರಾಜ್ಯವನ್ನು ಇನ್ನಷ್ಟು ಅಭಿವೃದ್ದಿಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಇನ್ನೂ ಕೂಡ ಕ್ಷೇತ್ರ ಅಂತಿಮವಾಗಿಲ್ಲ. ಇದರ ನಡುವೆ ಸದ್ಯದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಕೂಡ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.