ಉಜ್ವಲ ಯೋಜನೆಯಡಿ ನೀಡುವ ಎಲ್‌ಪಿಜಿ ಸಿಲಿಂಡರ್‌ಗೆ ನೀಡುವ ಸಬ್ಸಿಡಿ ವಿಸ್ತರಣೆ

ಉಜ್ವಲ ಯೋಜನೆಯಡಿ ನೀಡುವ ಎಲ್‌ಪಿಜಿ ಸಿಲಿಂಡರ್‌ಗೆ ನೀಡುವ ಸಬ್ಸಿಡಿ ವಿಸ್ತರಣೆ

ವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (‍ಪಿಎಂಯುವೈ) ಅಡಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ನೀಡುವ ₹ 200 ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಿರುವ ಕಾರಣ ಹೀಗೆ ಮಾಡಲಾಗಿದೆ.

ಕೇಂದ್ರದ ಈ ತೀರ್ಮಾನದಿಂದಾಗಿ 9.6 ಕೋಟಿ ಕುಟುಂಬಗಳಿಗೆ ಪ್ರಯೋಜನ ಆಗಲಿದೆ. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿಯು ಈ ತೀರ್ಮಾನ ಕೈಗೊಂಡಿದೆ ಎಂದು ವಾರ್ತೆ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಬ್ಸಿಡಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.