ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ

ಳ್ಳಾರಿ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್..ಅಪ್ರೆಂಟಿಸ್ ನೇಮಕಾತಿಗಾಗಿ ಬಳ್ಳಾರಿಯಲ್ಲಿ ಡಿ.12 ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ.

ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳಗ್ಗೆ 9ಕ್ಕೆ ಕ್ಯಾಂಪಸ್ ಸಂದರ್ಶನ ನಡೆಯಲಿದ್ದು, 18 ರಿಂದ 26 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದು.ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಅಂಕಪಟ್ಟಿ ಆಧಾರ್ ಕಾರ್ಡ್ ಹಾಗೂ ಸಂಪೂರ್ಣ ವಿವರಗಳುಳ್ಳ ಬಯೋಡೇಟಾ ತರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ  ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.