ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ತುಮಕೂರು : ಪಾವಗಡ ಪುರಸಭೆಯಲ್ಲಿ ಖಾಲಿ ಇರುವ ನೇರ ನೇಮಕಾತಿ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳನ್ನು ಸೂಚನೆಯ ವಿವಿರವನ್ನು ದಿನಾಂಕ 13-01-2023 ರಿಂದ 13-02-2023 ರವರೆಗೆ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ತುಮಕುರು ಜಿಲ್ಲೆ ಇಲ್ಲಿ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ - 26
ಕನಿಷ್ಠ ವಿದ್ಯಾರ್ಹತೆ/ಅರ್ಹತೆ
- ವಿದ್ಯಾರ್ಹತೆ ಅನ್ವಯಿಸುವುದಿಲ್ಲ
- ಕನ್ನಡ ಮಾತನಾಡಲು ಬರಬೇಕು
- ತುಮಕೂರು ಜಿಲ್ಲೆಯ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕ ಹುದ್ದೆಯಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಪೌರಕಾರ್ಮಿಕ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಅಥವಾ ಲೋಡರ್ಸ್ ಅಥವಾ ಕ್ಲೀನರ್ ಆಧಾರದಲ್ಲಿ 2 ವರ್ಷಗಳಿಮದ ಕಡಿಮೆಯಿಲ್ಲದ ನಿರಂತರವಾಗಿ ಕೆಲಸ ನಿರ್ವಹಿಸುತ್ಇತರುವ ಹಾಗೂ ಈ ನಿಯಮಗಳ ಪ್ರಾರಂಭದ ದಿನಾಂಕದಿಂದಲು ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಆದ್ಯತೆ.
ಗರಿಷ್ಠ ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷದೊಳಗಿರಬೇಕು.
ವೇತನ ಶ್ರೇಣಿ :
17000-28950 ರೂ.ವರೆಗೆ