'ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ : ಸಿಎಂ ಬೊಮ್ಮಾಯಿ
ಬೆಂಗಳೂರು : ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯ ನಂ.1 ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ವಿಪಕ್ಷಗಳುಅಂಕಿ ಅಂಶ ತಿಳಿಯದೇ ಸುಮ್ಮನೆ ನಿರುದ್ಯೋಗದ ಬಗ್ಗೆ ಮಾತನಾಡುತ್ತಾರೆ, ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಮಂಚೂಣಿಯಲ್ಲಿದೆ ಎಂದು ಹೇಳಿದರು.
ಕೊರೊನಾ ಹಿನ್ನೆಲೆ ಕಳೆದ ವರ್ಷ ಭಾರತದಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿಲ್ಲ, ಕಳೆದ 6 ತಿಂಗಳಿನಿಂದ ದೇಶದ ಆರ್ಥಿಕತೆ ಮತ್ತೆ ಮಂಚೂಣಿಗೆ ಬಂದಿದೆ. ಅಮೆರಿಕ , ಕೆನಡಾ ರಾಷ್ಟ್ರಗಳಲ್ಲಿ ಹಣದುಬ್ಬರ ಏರಿಕೆಯಾಗುತ್ತಿದ್ದರೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಎಲ್ಲಾ ದೇಶಗಳ ದೃಷ್ಟಿ ಭಾರತದ ಮೇಲಿದೆ ಎಂದು ಬೊಮ್ಮಾಯಿ ಹೇಳಿದರು.ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ
ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ಎರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆ ನಡೆದ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ಎರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು. ಇದರಲ್ಲಿ 1 ಲಕ್ಷ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕನ್ನಡ ನಾಡು ಪುಣ್ಯದ ಬೀಡು. ನಮ್ಮದು ಅತ್ಯಂತ ಸಂಪದ್ಬರಿತವಾರ ನಾಡು. ಕರ್ನಾಟಕ ಏಕೀಕರಣ ಹೋರಾಟವನ್ನು ಯಾರು ಮರೆಯವಂತಿಲ್ಲ. ಮದ್ರಾಸ್ ಕರಾವಳಿ ಮಧ್ಯ ಕರ್ನಾಟಕ ಎಂದು ಹಂಚಿಹೋಗಿದ್ದ ಕನ್ನಡ ನಾಡನ್ನು ಹಾಲೂರು ವೆಂಕಟರಾಯರು ಹೋರಾಟ ಮಾಡಿ ಕರ್ನಾಟಕ ಏಕೀಕರಣ ಮಾಡಿದರು. ಹೋರಾಟದಲ್ಲಿ ಹಲವು ಮಹನೀಯ ಶ್ರಮವಿದೆ ಎಂದರು. ಶಿಕ್ಷಣ ಆರೋಗ್ಯ, ಉದ್ಯೋಗದ ಜೊತೆಗೆ ಭಾರತದ ಭವಿಷ್ಯವನ್ನೂ ನಿರ್ಮಾಣ ಮಾಡುವ ಶಕ್ತಿ ಕ್ನಾಟಕಕ್ಕೆ ಇದೆ. ಕರುನಾಡಿನಲ್ಲಿ ನಾವು ಹುಟ್ಟಿದ್ದೇವೆ ಎಂದರೆ ಅದು ಏಳು ಜನ್ಮದ ಪುಣ್ಯದ ಫಲ. ಕರ್ನಾಟಕದಲ್ಲಿ ಹುಟ್ಟಲು ಏಳು ಜನ್ಮದ ಪುಣ್ಯಬೇಕು ಎಂದು ಹೇಳಿದ್ದಾರೆ.