`ಉರಿಗೌಡ-ನಂಜೇಗೌಡ' ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ : ಶಾಸಕ ಸಿ.ಟಿ. ರವಿ

`ಉರಿಗೌಡ-ನಂಜೇಗೌಡ' ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ : ಶಾಸಕ ಸಿ.ಟಿ. ರವಿ

ಚಿಕ್ಕಮಗಳೂರು : ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಮಾಹಿತಿ ಸಂಗ್ರಹಿಸಿದ ಬಳಿಕ ಆದಿಚುಂಚನಗಿರಿ ಶ್ರೀಗಳ ಜೊತೆಗೆ ಮಾತನಾಡುತ್ತೇವೆ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಮಾಹಿತಿ ಸಂಗ್ರಹಿಸಿದ ಬಳಿಕ ಆದಿಚುಂಚನಗಿರಿ ಶ್ರೀಗಳ ಜೊತೆಗೆ ಮಾತನಾಡುತ್ತೇವೆ.

ಸ್ಥಳೀಯವಾಗಿ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ. ಮಾಹಿತಿ ಕಲೆ ಹಾಕಲು ಒಂದು ತಂಡ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಎಂಬುದರ ಬಗ್ಗೆ ಸಾಕ್ಷ್ಯ ಇದೆ. ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡ ಹೆಸರುಗಳ ಉಲ್ಲೇಖ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಶ್ರೀಗಳಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.