ಎಂಎಲ್‌ಎ ಹೆಸರಲ್ಲಿ KSRTC ಎಂಡಿಗೆ ಕರೆ; ವರ್ಗಾವಣೆಗೆ ಶಿಫಾರಸು

ಬೆಂಗಳೂರು: ಶಾಸಕರ ಹೆಸರಿನಲ್ಲಿ ಕೆ ಎಸ್ ಆರ್ ಟಿ ಸಿ ಎಂಡಿಗೆ ಕರೆ ಮಾಡಿ ವರ್ಗಾವಣೆಗೆ ಶಿಫಾರಸು ಮಾಡುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುನೀತ್ ಕುಮಾರ್ ಬಂಧಿತ ಆರೋಪಿ.
ಅಧಿಕಾರಿಗಳು ಈ ಬಗ್ಗೆ ಶಾಸಕ ನಾಗೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿದಾಗ ಯಾರ ವರ್ಗಾವಣೆಗೂ ತಾವು ಶಿಫಾರಸು ಮಾಡಿಲ್ಲ ಎಂದು ಶಾಸಕರು ತಿಳಿಸಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.