ಏಪ್ರಿಲ್ 3 ನೇ ವಾರದಲ್ಲಿ `ದ್ವಿತೀಯ ಪಿಯುಸಿ' ಫಲಿತಾಂಶ ಪ್ರಕಟ

ಏಪ್ರಿಲ್ 3 ನೇ ವಾರದಲ್ಲಿ `ದ್ವಿತೀಯ ಪಿಯುಸಿ' ಫಲಿತಾಂಶ ಪ್ರಕಟ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 5 ರಿಂದ ಆರಂಭವಾಗಿದ್ದು, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಶುರುವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನುಏಪ್ರಿಲ್ ತಿಂಗಳ 3 ನೇ ವಾರದಲ್ಲಿ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ. ಮೇ. 5 ರಿಂದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2023 ಆರಂಭವಾಗಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂದಿನ ಐದಾರು ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ಮುಗಿಸಿ, ಏಪ್ರಿಲ್ 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.