ಏ.9 ರಂದು ಬಂಡೀಪುರಕ್ಕೆ 'ಪ್ರಧಾನಿ ಮೋದಿ' ಭೇಟಿ : ಹೆಲಿಪ್ಯಾಡ್ ನಿರ್ಮಾಣ ಸಿದ್ದತೆ ಪರಿಶೀಲಿಸಿದ 'ADGP' ಅಲೋಕ್ ಕುಮಾರ್
ಚಾಮರಾಜನಗರ : ಏ.9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಭೇಟಿ ನೀಡುತ್ತಿದ್ದು, ಎಡಿಜಿಪಿ ಅಲೋಕ್ ಕುಮಾರ್ ಹೆಲಿಪ್ಯಾಡ್ ನಿರ್ಮಾಣ ಸಿದ್ದತೆ ಪರಿಶೀಲಿಸಿದ್ದಾರೆ.
ಬಂಡೀಪುರ ಅರಣ್ಯ ವ್ಯಾಪ್ತಿಯ ಮೇಲುಕಾಮನಹಳ್ಳಿ ಹೆಲಿಪ್ಯಾಡ್ ನಿರ್ಮಾಣ ಸಿದ್ದತೆ ಪರಿಶೀಲಿಸಿದ ಅಲೋಕ್ ಕುಮಾರ್ ನಂತರ ಚಾಮರಾಜನಗರದ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಭದ್ರತೆ ಬಗ್ಗೆ ಚರ್ಚೆ ನಡೆಸಿದರು.ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ಏಪ್ರಿಲ್ 8 ಮತ್ತು 9 ರಂದು ಭದ್ರತೆ ಕಾಪಾಡುವ ದೃಷ್ಟಿಯಿಂದ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂರ್ಧಿಸಲಾಗಿದೆ ಎಂದು ಬಂಡೀಪುರ ಉದ್ಯಾನವನ ಸಿಎಫ್ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರದ ಕುರಿತು H.D ದೇವೇಗೌಡ ಹೇಳಿದ್ದೇನು..?
ನವದೆಹಲಿ : ವರುಣದಲ್ಲಿ ವಿಜಯೇಂದ್ರ ಸ್ಪರ್ಧೆ ಕುರಿತು ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನೇನು ಹೇಳಲ್ಲ ಎಂದು ಹೇಳಿದರು.ವರುಣಾದಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ, ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಯಡಿಯೂರಪ್ಪ ನಿರ್ಧಾರವಾಗಿತ್ತು, ಕೊನೆಗೆ ಅವರೇ ಬೇಡ ಎಂದಿದ್ದಾರೆ. ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಬಿಜೆಪಿ ಹೈಕಮಾಂಡ್, ನಡ್ಡಾ, ಅಮಿತ್ ಶಾ ಇದ್ದಾರೆ. ಅವರು ಏನು ಹೇಳಿದ್ದಾರೆ ಗೊತ್ತಿಲ್ಲ, ನಾನು ಇದಕ್ಕೆ ಪ್ರತಿಕ್ರಿಯೆ ನೀಡಲ್ಲ ಎಂದರು. ಈ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಯಾರ ಜೊತೆನೂ ಮಾತನಾಡಿಲ್ಲ, ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ಏನೂ ಹೇಳಲ್ಲ ಎಂದು ದೇವೇಗೌಡ ಪ್ರತಿಕ್ರಿಯೆ ನೀಡಿದರು.