ಒಂದು ದೇಶ ಒಂದು ಪೊಲೀಸ್ ಸಮವಸ್ತ್ರ' ಕ್ಕೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯಾಗುವಂತಹ ಏಕರೂಪದ ಯೂನಿಫಾರ್ಮ್ ಪದ್ಧತಿ ಜಾರಿಗೆ ತರಲು ಕೇಂದ್ರದ ಗೃಹ ಇಲಾಖೆರಾಜ್ಯ ಸರಕಾರಗಳ ಅಭಿಪ್ರಾಯ ಕೇಳಿದ್ದು, ಕರ್ನಾಟಕ ರಾಜ್ಯ ಸರಕಾರ ' ಒನ್ ನೇಷನ್ ಒನ್ ಯೂನಿಫಾರ್ಮ್' ವ್ಯವಸ್ಥೆ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಿದೆ.
ಈ ಕುರಿತ ರಾಜ್ಯ ಒಳಾಡಳಿತ ಇಲಾಖೆಯ ಪ್ರಸ್ತಾವನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೇಂದ್ರ ಗೃಹ ಇಲಾಖೆಯ ಒನ್ ನೇಷನ್, ಒನ್ ಯೂನಿಫಾರ್ಮ್ ಜಾರಿಗೆ ಸಮ್ಮತಿ ನೀಡಿದ್ದಾರೆ.
ರಾಜ್ಯ ಸರ್ಕಾರಗಳ ಗೃಹ ಸಚಿವರಿಗೆ ಹರ್ಯಾಣದಲ್ಲಿ ಆಯೋಜಿಸಿರುವ ಚಿಂತನ ಶಿಬಿರವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದ ಪ್ರಧಾನಿ ಮೋದಿ, ದೇಶಾದ್ಯಂತ ಇರುವ ಪೊಲೀಸರ ಗುರುತು ಅನನ್ಯವಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಇದು ಒಂದು 'ಪರಿಕಲ್ಪನೆ' ಅಷ್ಟೇ ಆಗಿದ್ದು, ಹೇರಿಕೆ ಅಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಇದೊಂದು ಸಲಹೆಯಾಗಿ ಪರಿಗಣಿಸುವಂತೆ ರಾಜ್ಯಗಳಿಗೆ ಅವರು ಸಲಹೆ ನೀಡಿದ್ದರು. ಅದರಂತೆ ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯಗುವಂತಹ ಏಕರೂಪದ ಯೂನಿಫಾರ್ಮ್ ಪದ್ಧತಿ ಜಾರಿಗೆ ತರಲು ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು
ರಾಜ್ಯ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಶಾಲೆಗಳಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ
ಬೆಂಗಳೂರು: ಮಕ್ಕಳು ಪರೀಕ್ಷೆಯ ಒತ್ತಡದಿಂದ ಹೊರ ಬಂದು ಆಸಕ್ತಿಯಿಂದ, ಖುಷಿಯಿಂದ ಪರೀಕ್ಷೆ ಬರೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಡೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ತಿಳಿಸಿದರು.
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಮಂಗಳವಾರ (ಜ.17) ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರು.