ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಕಾಂಗ್ರೆಸ್ ಶಾಸಕ ʻಅರ್ಜುನ್ ಚರಣ್ ದಾಸ್ʼ ಸಾವು

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಕಾಂಗ್ರೆಸ್ ಶಾಸಕ ʻಅರ್ಜುನ್ ಚರಣ್ ದಾಸ್ʼ ಸಾವು

ಡಿಶಾ: ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಅರ್ಜುನ್ ಚರಣ್ ದಾಸ್ ಮೃತಪಟ್ಟಿದ್ದಾರೆ.

ಜಿಲ್ಲೆಯ ಖರಾಸ್ರೋಟಾ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ.

ಅರ್ಜುನ್ ಚರಣ್ ದಾಸ್ ಅವರ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಾನೆ ಸಂಭವಿಸಿದ ಕೂಡಲೇ ದಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದ್ರೆ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಕಟಕ್ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ' ಎಂದು ಅಧಿಕಾರಿ ಹೇಳಿದರು.ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿಗೆ ದಾಸ್ ಇತ್ತೀಚೆಗೆ ಸೇರ್ಪಡೆಗೊಂಡಿದ್ದರು. ಪಕ್ಷದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ದಾಸ್ ಜಾಜ್‌ಪುರದಿಂದ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.