ಒಡಿಶಾ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಮಿನಿ ಟ್ರಕ್‌ ಡಿಕ್ಕಿ; 7 ಮಂದಿ ಸಾವು

ಒಡಿಶಾ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಮಿನಿ ಟ್ರಕ್‌ ಡಿಕ್ಕಿ; 7 ಮಂದಿ ಸಾವು

ಜಾಜ್‌ಪುರ (ಒಡಿಶಾ): ಒಡಿಶಾದ ಜಾಜ್‌ಪುರದಲ್ಲಿ ಶನಿವಾರ ಎರಡು ಟ್ರಕ್‌ಗಳು ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ.

ಏಳು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ಕೋಲ್ಕತ್ತಾಗೆ ತೆರಳುತ್ತಿದ್ದ ವೇಳೆ ಕೆಟ್ಟು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿಯೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಜಾಜ್‌ಪುರದ ಧರ್ಮಶಾಲಾ ಪೊಲೀಸ್ ವ್ಯಾಪ್ತಿಯ ನ್ಯೂಲ್‌ಪುರ್ ಬಳಿ NH-16 ನಲ್ಲಿ ಸಂಭವಿಸಿದೆ.

ಘಟನೆ ವೇಳೆ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದರು ಮತ್ತು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲ್ಪಟ್ಟ ಇನ್ನೊಬ್ಬರು ಸಹ ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಶಾಲಾ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. 'ನಾವು ಶವಗಳ ಗುರುತು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗುವುದು' ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.