ಅಪ್ರಾಪ್ತ ಮಕ್ಕಳಿಗೆ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮಾರಾಟ ಮಾಡುವಂತಿಲ್ಲ : ಔಷಧ ನಿಯಂತ್ರಣ ಇಲಾಖೆ ಖಡಕ್ ಸೂಚನೆ

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ವರ್ಷದೊಳಗಿನ ಮಕ್ಕಳಿಗೆ ಸರ್ಕಾರ ಹೊಸ ರೂಲ್ಸ್ ಜಾರಿಗೆ ತರುತ್ತಿದ್ದಾರೆ.
ಮಕ್ಕಳಿಗೆ ಕಾಂಡೋಮ್ ಮಾರಾಟ ಮಾಡದಂತೆ ನಿಯಮ ಜಾರಿಗೆ ತಂದಿದ್ದಾರೆ.
ಶಾಲಾ ಮಕ್ಕಳು ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕಾಂಡೋಮ್ ಮತ್ತು ಗರ್ಭ ನಿರೋಧಕ ಮಾತ್ರೆ ಸೇರಿಂದತೆ ಉತ್ತೇಜಕ ಮಾತ್ರೆಗಳನ್ನು ನೀಡಬಾರದು ಎಂದು ಸೂಚನೆ ರವಾನೆ ಅಗಿದೆ. ಕೊರೊನಾದ ನಂತರ ಮಕ್ಕಳು ಕೆಟ್ಟ ಚಟಗಳಿಗೆ ಬಲಿಯಾಗುತ್ತಿದ್ದಾರೆ.
ಹೀಗಾಗಿ ಮಕ್ಕಳ ಭವಿಷ್ಯದ ಬಗ್ಗೆ ಆರೋಗ್ಯ ಇಲಾಖೆ ಗಮನಹರಿಸುತ್ತಿದೆ.