ಕಂಪ್ಯೂಟರ್ ಪರೀಕ್ಷೆ, ಸರ್ಕಾರಕ್ಕೆ ಸರ್ಕಾರಿ ನೌಕರರ ಪತ್ರ

ರಾಜ್ಯ ಸರ್ಕಾರಿ ನೌಕರರು 'ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ'ಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಪತ್ರವೊಂದನ್ನು ಬರೆದಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಈ ಕುರಿತು ಮಾನ್ಯ ಕಾರ್ಯದರ್ಶಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇವರಿಗೆ ಮಂಗಳವಾರ ಪತ್ರವನ್ನು ಬರೆದಿದ್ದಾರೆ.