ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಹಾವೇರಿಗೆ ಆಗಮಿಸಿದ್ದ ಮಂಡ್ಯ ಮೂಲದ ಶಿಕ್ಷಕ ಸಾವು

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಹಾವೇರಿಗೆ ಆಗಮಿಸಿದ್ದ ಮಂಡ್ಯ ಮೂಲದ ಶಿಕ್ಷಕ ಸಾವು

ಹಾವೇರಿ: ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಉಸಿರಾಟ ಸಮಸ್ಯೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತರು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಮಂಡ್ಯದಿಂದ ಹಾವೇರಿಗೆ ಆಗಮಿಸಿದ್ದರು. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ಶುಕ್ರವಾರ ರಾತ್ರಿ ಸಂಗನಗೌಡರು ವಾಸ್ತವ್ಯ ಮಾಡಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಉಂಟಾಗಿದೆ.

ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ಸಂಗನಗೌಡರನ್ನು ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಯಿತು. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.