ಕಬ್ಬಿನ ಗದ್ದೆಗೆ ನುಗ್ಗಿದ ಬಸ್; ಅದೃಷ್ಟವಶಾತ್ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು

ಬೆಳಗಾವಿ: ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್ ಸೋಮಾಪುರ ಗ್ರಾಮದಿಂದ ತಲ್ಲೂರ ಗ್ರಾಮಕ್ಕೆ ಸಂಚರಿಸುತ್ತಿತ್ತು.
ತಾಲ್ಲೂರು ಗ್ರಾಮದ ಪಕಾಲಿ ಎಂಬುವವರ ಕಬ್ಬಿನ ಗದ್ದೆಗೆ ಬಸ್ ನುಗ್ಗಿದೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಚಾಲಕ ಸೇರಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯರು ಗಾಯಾಳುಗಳನ್ನು ಯರಗಟ್ಟಿ ತಾಲೂಕು ಆಸ್ಪತ್ರಗೆ ದಾಖಲಿಸಿದ್ದಾರೆ.
ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.