ಕರ್ನಾಟಕದಲ್ಲಿ ಇನ್ನೂ 4 ದಿನ ಗುಡುಗು ಸಹಿತ ಮಳೆ; ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ

ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ & ಕರಾವಳಿಯಲ್ಲಿ ಡಿ. 16ರವರೆಗೂ ಗುಡುಗು ಸಹಿತ ಮಳೆ ಮಳೆಯಾಗಲಿದೆ. ಚಾಮರಾಜನಗರ, ಕೊಡಗು & ಶಿವಮೊಗ್ಗ ಜಿಲ್ಲೆಗಳಿಗೆ IMD ಹಳದಿ ಅಲರ್ಟ್ ಘೋಷಿಸಿದೆ.