ಕರ್ನಾಟಕದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಮನ್ನಾ : ಅರವಿಂದ್ ಕೇಜ್ರಿವಾಲ್ ಘೋಷಣೆ

ಕರ್ನಾಟಕದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಮನ್ನಾ : ಅರವಿಂದ್ ಕೇಜ್ರಿವಾಲ್ ಘೋಷಣೆ

ದಾವಣಗೆರೆ : ನಾವು ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಮನ್ನಾ ಮಾಡಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ನಡೆದ ಆಪ್ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್ 'ಇದು 40 % ಸರ್ಕಾರ.

ಅಮಿತ್ ಶಾ ಕರ್ನಾಟಕಕ್ಕೆ ಬಂದು ದೊಡ್ಡ ಮಾತನಾಡುತ್ತಾರೆ, ಇಲ್ಲಿನ ಜಿಲ್ಲೆಯ ಪುತ್ರ 8 ಕೋಟಿ ಜೊತೆ ಸಿಕ್ಕಿ ಹಾಕಿಕೊಂಡಿದ್ದಾನೆ. ನಮಗೆ ಒಂದು ಅವಕಾಶ ಕೊಡಿ ನಾವು ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲಾ ಸಾಲಮನ್ನಾ ಮಾಡುತ್ತೇವೆ, ಬಡವರಿಗಾಗಿ ಜನಪರ ಯೋಜನೆ ತರುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕರ್ನಾಟಕದಲ್ಲಿರುವ 40% ಸರ್ಕಾರವನ್ನು ಕಿತ್ತೊಸೆಯಬೇಕು, ಅದಕ್ಕಾಗಿ ನಾವು ಇಲ್ಲಿಗೆ ಬಂದಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. 40 ಸರ್ಕಾರವನ್ನು ಕಿತ್ತೊಸೆಯಬೇಕು. ಅದಕ್ಕಾಗಿ ಆಮ್ ಆದ್ಮಿ ಪಕ್ಷ ಕರ್ನಾಟಕಕ್ಕೆ ಬಂದಿದೆ. ದೆಹಲಿ, ಪಂಜಾಬ್ ನಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದಲ್ಲೂ ಪ್ರಮಾಣಿಕವಾಗಿ ಸರ್ಕಾರವ ನೀಡುವ ಗುರಿ ಇದೆ. ಕರ್ನಾಟಕದಲ್ಲೂ ಆಮ್ ಆದ್ಮಿ ಪಕ್ಷದ ಬಲವರ್ಧನೆ ಮಾಡುತ್ತಿದ್ದೇವೆ ಎಂದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜ್ಯದಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ನಾನಾ ಕಸರತ್ತು ಮಾಡುತ್ತಿದೆ. ಇದೀಗ ಬಿಜೆಪಿ, ಕಾಂಗ್ರೆಸ್ ಗೆ ಟಕ್ಕರ್ ನೀಡಲು ಆಮ್ ಆದ್ಮಿ ಪಕ್ಷ ಕರ್ನಾಟಕದಲ್ಲಿ ಚುನಾವಣಾ ರಣಕಹಳೆ ಮೊಳಗಿಸುತ್ತಿದೆ.

ಲೋಕಾಯುಕ್ತ' ಸಂಸ್ಥೆಯನ್ನು ಮುಚ್ಚಿಹಾಕಿದ್ದೇ ಸಿದ್ದರಾಮಯ್ಯ : ಸಿಎಂ ಬೊಮ್ಮಾಯಿ ತಿರುಗೇಟು

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ( Siddaramaiah ) ಅವರು, ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಮನೆಗೆ ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ವೇಳೆ ಮಾತನಾಡಿದಂತ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ ಎಂದರು.