ಕರ್ನಾಟಕ ಪೊಲೀಸ್ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇದ್ದಂತ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟ್, ಆರ್ ಎಸ್ ಐ ಹಾಗೂ ಕೆಎಸ್‌ಐಎಸ್‌ಎಫ್ ನ ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ( PSI Recruitment ) ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಸಂಬಂಧ ಮಾಹಿತಿ ನೀಡಿರುವಂತ ಡಿಐಜಿ ಕಮಲ್ ಪಂತ್ ಅವರು, ಕೆ ಎಸ್‌ಐಎಸ್‌ಎಫ್ ನಲ್ಲಿ ಖಾಲಿ ಇದ್ದಂತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ 63 ಹುದ್ದೆಗಳು, ಆರ್ಮಡ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್ 71 ಹುದ್ದೆಗಳು ಹಾಗೂ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್ 70 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವಿವಿಧ ಪರೀಕ್ಷೆಯನ್ನು ತೇರ್ಗಡೆಯಾಗಿ, ಆಯ್ಕೆಗಾಗಿ ಕಾಯುತ್ತಿದ್ದಂತ ಅಭ್ಯರ್ಥಿಗಳು https://ksp.karnataka.gov.in/english ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ತಮ್ಮ ಆಯ್ಕೆಯನ್ನು ಪರಿಶೀಲಿಸಬಹುದಾಗಿದೆ. ಇಲ್ಲವೇ ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30ರಿಂದ ಸಂಜೆ 5.30ರ ಒಳಗೆ 080-22943346/3039 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.