ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಸಿಎಂ ಹೇಳಿದ್ದೇನು?
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಎಲ್ಲಾ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಿದ್ದು, ನಾಳೆ , ನಾಡಿದ್ದು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ಮಾಡುತ್ತೇವೆ.
ಇನ್ನು ಹಲವು ಕ್ಷೇತ್ರಗಳಲ್ಲಿ 10 ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಬೆಳಗಾವಿ, ಚಿತ್ತಾಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಟಿಕೆಟ್ ವಿಚಾರವಾಗಿ ಯಾವುದೇ ಅಸಮಾಧಾನ ಇಲ್ಲ. ಶಾಸಕರ ಬಗ್ಗೆಯೂ ಅಸಮಾಧಾನ ಇಲ್ಲ ಎಂದು ತಿಳಿಸಿದ್ದಾರೆ.