ಕಾಂಗ್ರೆಸ್‌ -ಜೆಡಿಎಸ್‌ ಸಭೆ ನಡೆಸಿದ್ರೆ ಚಪ್ಪಲಿ ಹಿಡಿದು ಕಿತ್ತಾಡುತ್ತಾರೆ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಕಾಂಗ್ರೆಸ್‌ -ಜೆಡಿಎಸ್‌ ಸಭೆ ನಡೆಸಿದ್ರೆ ಚಪ್ಪಲಿ ಹಿಡಿದು ಕಿತ್ತಾಡುತ್ತಾರೆ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ರಾಜ್ಯ ಬಿಜೆಪಿ ಜಗನ್ನಾಥ ಭವನ ಕಚೇರಿಯಲ್ಲಿ ನಡೆದ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆದಿದೆ. ಈ ಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ಕಿತ್ತಾಡುತ್ತಾರೆ.

ಆದರೆ ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು. ಶಾಂತವಾಗಿ ನಮ್ಮ ಸಭೆ ನಡೆಯುತ್ತದೆ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು ಪರಸ್ಪರ ಚಪ್ಪಲಿಗಳಲ್ಲಿ ಕಿತ್ತಾಡಿಕೊಂಡು ಸಭೆ ಮಾಡ್ತಾರೆ ಎಂದು ಕಟೀಲ್ ವ್ಯಂಗ್ಯವಾಡಿದ್ದಾರೆ. ಮೂರು ಪಕ್ಷಗಳಲ್ಲೂ ಮೂರು ವಿಭಿನ್ನತೆ ಇದೆ. ರಾಷ್ಟ್ರೀಯ ಪಾರ್ಟಿಯೊಂದರ ಸಭೆ ಆದಾಗ ಚಪ್ಪಲಿಗಳು ಕೈಯಲ್ಲಿ ಇರುತ್ತದೆ. ಇನ್ನೊಂದು ಕುಟುಂಬದ ಪಕ್ಷ ಇದೆ. ಅಪ್ಪ ಮಕ್ಕಳ ಪಾರ್ಟಿ ಅದು. ಅವರ ಪಾರ್ಟಿಯ ಮೀಟಿಂಗ್ ಆದಾಗ ಒಬ್ಬನ ಚಪ್ಪಲಿ ಇನ್ನೊಬ್ಬನ ದೇಹದೊಳಗೆ ಇರುತ್ತದೆ ಎಂದರು.