ಕಾಂಗ್ರೆಸ್ ಸಂವಿಧಾನ ತಿರುಚಿದೆ: ಸಿಎಂ ಬೊಮ್ಮಾಯಿ ವಾಗ್ಧಾಳಿ
ಬೆಂಗಳೂರು : ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮೈಸೂರಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಂವಿಧಾನವನ್ನು ಗಾಳಿಗೆ ತೂರಿ ತುರ್ತು ಪರಿಸ್ಥಿತಿಯನ್ನು ಹೇರಿದರು.
ದೆಹಲಿ ಭೇಟಿ
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಅವರಿನ್ನೂ ಸಮಯ ನೀಡಿಲ್ಲ. ಸಮಯ ನೀಡಿದರೆ ಭೇಟಿಯಾಗುತ್ತೇನೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದರು.