ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಬಿಜೆಪಿ ಶಾಸಕ..

ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಬಿಜೆಪಿ ಶಾಸಕ..

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ಪಕ್ಷಾಂತರ ಪರ್ವವೂ ಜೋರಾಗಿದೆ. ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಈಗಾಗಲೇ ಹೇಳಿದ್ದು, ಇದೀಗ ಮತ್ತೊಬ್ಬ ಬಿಜೆಪಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್, ತಮಗೆ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಸ್ಪರ್ಧಿಸುವುದಾಗಿ ಹೇಳಿದ್ದು, ಇದರ ಮಧ್ಯೆ ಕಾಂಗ್ರೆಸ್ ಟಿಕೆಟ್ ಗೂ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ತಮ್ಮ ಬೆಂಬಲಿಗರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಕಳುಹಿಸಿರುವ ಆರ್. ಶಂಕರ್, ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮಗೇ ನೀಡುವಂತೆ ಮನವಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.