ಕಾಂಜಾವಾಲಾ ಮಹಿಳೆ ಸಾವು ಪ್ರಕರಣ: ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಆರೋಪಿಗಳು ವಾಹನ ಚಲಾಯಿಸಿದ್ದರು- ಪ್ರತ್ಯಕ್ಷದರ್ಶಿಗಳು

ಕಾರಿನಡಿ ಮಹಿಳೆ ಸಿಲುಕಿರುವುದು ಅವರಿಗೆ ತಿಳಿದಿತ್ತು. ಆಕೆಯನ್ನು ತೊಡೆದುಹಾಕರು ಹಿಂದೆ-ಮುಂದೆ ಕಾರು ಚಲಾಯಿಸಿದ್ದರು. ಆದರೆ, ಅಂಜಲಿಯವರ ದೇಹದ ಭಾಗ ಕಾರಿನ ಭಾಗಗಳಲ್ಲಿ ಸಿಲುಕಿಕೊಂಡಿತ್ತು. ಅಂಜಲಿಯವರು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದರು, ಆದರೆ, ಅವರು ಈ ಬಗ್ಗೆ ಗಮನಕೊಡದಂತೆ ಕಾರು ಚಲಾಯಿಸಿದ್ದರು ಎಂದು ಮೃತ ಮಹಿಳೆಯ ಸ್ನೇಹಿತೆ ನಿಧಿ ಕೂಡ ಖಾಸಗಿ ವಾಹನಿಯೊಂದರಲ್ಲಿ ಹೇಳಿಕೊಂಡಿದ್ದಾರೆ.
ಘಟನೆ ಬಗ್ಗೆ ಪೊಲೀಸರಿಗೇಕೆ ಮಾಹಿತಿ ನೀಡಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಅಪಘಾತ ನೋಡಿದ ಬಳಿಕ ನಾನು ಆಘಾತಕ್ಕೊಳಗಾಗಿದ್ದೆ. ಮಾತನಾಡುವ ಸ್ಥಿತಿಯಲ್ಲಿ ನಾನಿರಲಿಲ್ಲ. ಸಂಪೂರ್ಣ ನಿಸ್ಸಾಹಕ ಹಾಗೂ ಭಯಭೀತಳಾಗಿದ್ದೆ. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ.
ಆಘಾತಕ್ಕೊಳಗಾಗಿದ್ದ ನಾನು ನೇರವಾಗಿ ಮನೆಗೆ ಹೋಗಿದ್ದೆ, ಅಪಘಾತದ ಬಗ್ಗೆ ಅಂಜಲಿ ಮನೆಯವರಿಗೆ ತಿಳಿಸಿದ್ದೆ. ಆದರೆ, ಅವರು ನನ್ನ ಮೇಲೆ ಆರೋಪ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ಇನ್ನು ಜಗಳದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿ, ಸ್ಕೂಟಿ ಯಾರು ಚಲಾಯಿಸಬೇಕೆಂಬುದರ ಬಗ್ಗೆ ಇಬ್ಬರ ನಡುವೆ ಜಗಳವಾಗುತ್ತಿತ್ತು ಎಂದಿದ್ದಾರೆ. ಈ ಬಗ್ಗೆ ನಿಧಿಯವರು ಪ್ರತಿಕ್ರಿಯೆ ನೀಡಿ, ಅಂಜಲಿ ಮದ್ಯದ ಅಮಲಿನಲ್ಲಿದ್ದಳು.